ಕೊಣಾಜೆ ಪೊಲೀಸ್ ಠಾಣೆಯ ಖಾಲಿ ಹುದ್ದೆ ಭರ್ತಿಗೊಳಿಸಲು ಡಿವೈಎಫ್‌ಐ ಒತ್ತಾಯ

Update: 2019-02-14 14:55 GMT

ಮಂಗಳೂರು, ಫೆ.14: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಖಾಲಿ ಇರುವ ಕಾನೂನು ಸುವ್ಯವಸ್ಥೆ ಹಾಗೂ ಕ್ರೈಂ ವಿಭಾಗದ ಉಪನಿರೀಕ್ಷಕರು ಹಾಗೂ ಇತರ ಖಾಲಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ನಿಯೋಗ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ. ಕಳ್ಳತನ, ಕೊಲೆ, ಸುಲಿಗೆಯಂತಹ ಚಟುವಟಿಕೆಗಳಿಂದ ಜನ ಭೀತಿಯಿಂದ ಜೀವಿಸುವಂತಾಗಿದೆ. ಇಲ್ಲಿನ ಠಾಣೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಇಲ್ಲಿನ ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕಲು ಸಾಧ್ಯವಿದೆ. ಇದಕ್ಕಾಗಿ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.

ನಿಯೋಗದಲ್ಲಿ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ವಲಯ ಉಪಾಧ್ಯಕ್ಷ ರಫೀಕ್ ಹರೇಕಳ, ಮುಖಂಡರಾದ ಅಶ್ರಫ್ ಕೆ.ಸಿ.ರೋಡ್, ಸುನಿಲ್ ತೇವುಲ, ಶಾಕಿರ್ ಹರೇಕಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News