ಉದ್ಯೋಗ ಖಾತ್ರಿ ಕೂಲಿ ಪಾವತಿಗೆ ಒತ್ತಾಯ: ಫೆ.20ಕ್ಕೆ ಕುಂದಾಪುರ ತಾಪಂ ಎದುರು ಅನಿರ್ಧಿಷ್ಟಾವಧಿ ಧರಣಿ

Update: 2019-02-14 15:03 GMT

ಕುಂದಾಪುರ, ಫೆ.14: ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲುಯು)ಕ್ಕೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರ ಕೂಲಿಯನ್ನು ನಿಯಮಿತವಾಗಿ ಪಾವತಿ ಮಾಡದಿರುವುದನ್ನು ಪ್ರತಿಭಟಿಸಿ ಫೆ.20ರ ಬುಧವಾರ ಬೆಳಿಗ್ಗೆ 11ರಿಂದ ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಮುಷ್ಕರ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಪುಟ್ಟಮಾದಾ ಮಂಡ್ಯ ಇವರು ಧರಣಿ ಮುಷ್ಕರದ ಹೋರಾಟಕ್ಕೆ ಚಾಲನೆ ನೀಡಲು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರತ್ನ ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News