ಕೇಂದ್ರದ ವಿವಿಧ ಯೋಜನೆಗಳ ಫಲಾನುಭವಿಗಳ ವಿಭಾಗ: ರಾಜ್ಯ ಸಹ ಸಂಚಾಲಕರಾಗಿ ಉದಯಕುಮಾರ್ ಶೆಟ್ಟಿ ನೇಮಕ
Update: 2019-02-14 20:36 IST
ಉಡುಪಿ, ಫೆ.14: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ವಿಭಾಗಕ್ಕೆ ರಾಜ್ಯ ಸಹಸಂಚಾಲಕರಾಗಿ ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ, ಮಂಗಳೂರು ವಿಭಾಗದ ಉಸ್ತುವಾರಿ ಕೆ.ಉದಯಕುಮಾರ್ ಶೆಟ್ಟಿ ಇವರನ್ನು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇಮಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಫಲಾನುಭವಿಗಳ ವಿಭಾಗದ ಉಸ್ತುವಾರಿಯನ್ನು ಇವರಿಗೆ ವಹಿಸಲಾಗಿದೆ.