ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ ಪ್ರಕರಣ: ಫೆ. 22ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2019-02-14 16:31 GMT

ಬೆಂಗಳೂರು, ಫೆ.14: ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ರದ್ದು ಕೋರಿ ಸಚಿವ ಡಿ.ಕೆ. ಶಿವಕುಮಾರ್ ಆಪ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆ 22ಕ್ಕೆ ಮುಂದೂಡಿದೆ.

ಸಮನ್ಸ್ ರದ್ದು ಕೋರಿ ಡಿಕೆಶಿ ಆಪ್ತರಾದ ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ, ಸುನಿಲ್‌ಕುಮಾರ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣವೇನು: ಸಚಿವ ಡಿ.ಕೆ. ಶಿವಕುಮಾರ್ ಅವರ ವ್ಯವಹಾರಗಳ ಪಾಲುದಾರ ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ ಮತ್ತು ಸುನಿಲ್ ಎಂಬುವರ ಹೊಸದಿಲ್ಲಿಯ ಫ್ಲಾಟ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ದಾಳಿ ಮಾಡಿದಾಗ ಫ್ಲಾಟ್‌ನಲ್ಲಿ 6.68 ಕೋಟಿ ರೂ.ವಶಪಡಿಸಿಕೊಂಡಿದ್ದರು. ಈ ಸಂಬಂಧ ಇಡಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ರದ್ದು ಕೋರಿ ಡಿಕೆಶಿ ಆಪ್ತರು ಕಳೆದ ವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News