ಇವಿಎಂ ಬಳಕೆಯ ವಿರುದ್ಧ ಸುಪ್ರೀಂ ಮೆಟ್ಟಿಲನ್ನೇರಲು ಸಜ್ಜು: ಚಂದ್ರಬಾಬು ನಾಯ್ಡು

Update: 2019-02-14 16:44 GMT

ಅಮರಾವತಿ,ಫೆ.14: ವಿದ್ಯುನ್ಮಾನ ಮತದಾನ ಯಂತ್ರ(ಇವಿಎಂ)ಗಳ ಬಳಕೆಯ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಲು ಕೆಲವು ಬಿಜೆಪಿಯೇತರ ಪಕ್ಷಗಳು ನಿರ್ಧರಿಸಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಗುರುವಾರ ಇಲ್ಲಿ ತಿಳಿಸಿದರು.

ಬುಧವಾರ ರಾತ್ರಿ ದಿಲ್ಲಿಯಲ್ಲಿ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಟಿಡಿಪಿ ನಾಯಕರೊಂದಿಗೆ ನಡೆಸಿದ ಟೆಲಿಕಾನ್ಫರೆನ್ಸ್‌ನಲ್ಲಿ ಅವರು ತಿಳಿಸಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಇವಿಎಂಗಳ ಬಳಕೆಯನ್ನು ರದ್ದುಗೊಳಿಸಬೇಕು ಮತ್ತು ಹಳೆಯ ಮತಪತ್ರ ವ್ಯವಸ್ಥೆಗೆ ಮರಳಬೇಕು ಎಂದು ಟಿಡಿಪಿ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ.

ಚುನಾವಣಾಪೂರ್ವ ಮೈತ್ರಿಕೂಟವನ್ನು ರಚಿಸಲು ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದೂ ನಾಯ್ಡು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News