ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆ

Update: 2019-02-14 16:48 GMT

ಬೆಂಗಳೂರು, ಫೆ.14: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಗೃಹಿಣಿ ಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಗೀತಾ(23) ಎಂಬಾಕೆ ಮೃತ ಗೃಹಿಣಿ ಎಂದು ತಿಳಿದುಬಂದಿದೆ.

ಹಲಸೂರು ಗೇಟ್ ಬಳಿ ಇರುವ ಸಂಗಲ್ ಪೇಟೆಯ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಐದು ವರ್ಷಗಳ ಹಿಂದೆ ಕೊಲ್ಕತ್ತಾದಲ್ಲಿ ಸಂಗೀತಾ ಅವರು, ನಬೀತ್ ಎಂಬಾತನನ್ನು ವಿವಾಹವಾಗಿದ್ದರು. ಬಳಿಕ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ದಂಪತಿ ವಾಸಿಸುತ್ತಿದ್ದರು. ವಿವಾಹವಾಗಿ ಐದು ವರ್ಷ ಕಳೆದರೂ ನಬೀತ್ ದಂಪತಿಗೆ ಮಕ್ಕಳಾಗಿರಲಿಲ್ಲ. ಇದರಿಂದ ಸಂಗೀತಾ ಬಹಳ ನೊಂದಿದ್ದರು ಎಂದು ಹೇಳಲಾಗುತ್ತಿದೆ.

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನೆಯ ಅಕ್ಕಪಕ್ಕದವರು ಹಾಗೂ ಸಂಬಂಧಿಕರು ಸಂಗೀತಾ ಅವರನ್ನು ಪ್ರಶ್ನೆ ಮಾಡುತ್ತಿದ್ದರು. ಇದರಿಂದು ನೊಂದು ಆಕೆ ಪತಿ ಮನೆಯಲ್ಲಿರದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಘಟನೆ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕೆ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News