ಅಕ್ರಮ ಮರಳು ಸಾಗಾಟ: ಲಾರಿಗಳ ವಶ

Update: 2019-02-14 16:50 GMT

ಮಂಗಳೂರು, ಫೆ.14: ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಮೂರು ಲಾರಿ ಸಹಿತ ಮರಳನ್ನು ಕಾವೂರು ಪೊಲೀಸರು ಗುರುವಾರ ವಶಕ್ಕೆ ಪಡೆದ್ದಾರೆ.

ಬೊಂದೇಲ್-ಕೆಪಿಟಿ ರಸ್ತೆಯಲ್ಲಿ ಮರಳು ತುಂಬಿದ ಮೂರು ಲಾರಿಗಳು ನಿಂತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ಬಗ್ಗೆ ಪರವಾನಿಗೆ ಪರಿಶೀಲನೆಯ ಕುರಿತು ಕಾವೂರು ಠಾಣಾ ಪೊಲೀಸ್ ನಿರೀಕ್ಷಕರು ಲಾರಿಯ ಹತ್ತಿರ ಹೋಗುತ್ತಿದ್ದಂತೆ, ಲಾರಿಯಲ್ಲಿದ್ದ ಚಾಲಕರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಲಾರಿಗಳನ್ನು ಸ್ವಾಧೀನಪಡಿಸಿಕೊಂಡು, ಲಾರಿಯ ಚಾಲಕ ಮತ್ತು ಮಾಲಕರ ವಿರುದ್ಧ ಮುಂದಿನ ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ. ಮೂರು ಲಾರಿಗಳು ಮತ್ತು 90 ಸಾವಿರ ರೂ. ಮೌಲ್ಯದ ಮೂರು ಲೋಡ್ ಮರಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀನಿವಾಸಗೌಡ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News