ವಿಜ್ಞಾನ ದಿನಾಚರಣೆ: 'ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ' ಲೇಖನ ಸ್ಪರ್ಧೆ

Update: 2019-02-14 17:08 GMT

ಮಂಗಳೂರು, ಫೆ.14: ನೋಬೆಲ್ ಪ್ರಶಸ್ತಿ ವಿಜೇತ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ. ರಾಮನ್ ಪ್ರತಿಷ್ಠಿತ ಅನ್ವೇಷಣೆ ರಾಮನ್ ಪರಿಣಾಮವನ್ನು ಜಗತ್ತಿಗೆ ಘೋಷಿಸಿದ ದಿನವಾದ ಫೆ.28 ನ್ನು ಪ್ರತಿವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಎಂದು ರಾಷ್ಟ್ರದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ‘ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ’ ವಿಷಯದಲ್ಲಿ ಲೇಖನ ಸ್ಪರ್ಧೆ ಆಯೋಜಿಸಲಾಗಿದೆ.

ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ‘ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ’ ಎಂಬ ಕೇಂದ್ರ ವಿಷಯದಡಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ವಿಜ್ಞಾನಾಸಕ್ತರಿಗೆ ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ ಆಯೋಜಿಸಲಾಗಿದೆ.

ಆಸಕ್ತರು 1,000 ಪದಗಳು ಮೀರದಂತೆ ಕಡ್ಡಾಯವಾಗಿ ಕನ್ನಡದಲ್ಲಿ ಲೇಖನ ಬರೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಲೇಖನದೊಂದಿಗೆ ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿವರಗಳನ್ನು ನಮೂದಿಸಬೇಕು. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರವನ್ನು ನೀಡಲಾಗುವುದು.

ಲೇಖನವನ್ನು ಫೆ.23ರ ಒಳಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ ನಂ.24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ ಬೆಂಗಳೂರು 560070 ಇಲ್ಲಿಗೆ ಪೋಸ್ಟ್ ಮೂಲಕ ಅಥವಾ ಇ-ಮೇಲ್: krvp.info@gmail.com ಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080- 26718939, ಮೊ. 9483549159ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News