ಬಸನಗೌಡ ದದ್ದಲ್‌ಗೆ ಎಲ್ಲ ಸಹಕಾರ: ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ

Update: 2019-02-14 18:04 GMT

ಬೆಂಗಳೂರು, ಫೆ. 14: ವಾಲ್ಮೀಕಿ ಅಭಿವೃದ್ದಿ ನಿಗಮದಡಿಯ ಯೋಜನೆಗಳನ್ನು ಸಮರ್ಥವಾಗಿ ಜಾರಿಗೆ ತರುವ ಮೂಲಕ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸಬೇಕು. ಈ ಜವಾಬ್ದಾರಿಯನ್ನು ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಸಮರ್ಥವಾಗಿ ನಿಭಾಯಿಸಲಿದ್ದಾರೆಂಬ ವಿಶ್ವಾಸವಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

ಗುರುವಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಸನಗೌಡ ದದ್ದಲ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವರಾಗಿ ತಾವು ನೂತನ ಅಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡಿ, ಸಮುದಾಯದ ಸಮಗ್ರ ಅಭ್ಯುದಯಕ್ಕೆ ಪ್ರಯತ್ನ ಮಾಡುವೆ ಎಂದರು.

ಮಹರ್ಷಿ ವಾಲ್ಮೀಕಿ ಅವರ ಜೀವನದ ಸಮಗ್ರ ಮಾಹಿತಿ ಒದಗಿಸಲು ಬೆಂಗಳೂರಿನಲ್ಲಿ ವಾಲ್ಮೀಕಿ ಮ್ಯೂಸಿಯಂ ಸ್ಥಾಪನೆಗೆ ಬೇಕಾಗುವ ಅಗತ್ಯ ನಿವೇಶನ ಈಗಾಗಲೇ ಗುರುತಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಮ್ಯೂಸಿಯಂ ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು. ಪದಗ್ರಹಣ ಮಾಡಿ ಮಾತನಾಡಿದ ಬಸವನಗೌಡ ದದ್ದಲ್, ತಮಗೆ ಪಕ್ಷ ಹಾಗೂ ಸರಕಾರ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದರು. ಸಮಾರಂಭದಲ್ಲಿ ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ, ಸಂಸದೀಯ ಕಾರ್ಯದರ್ಶಿ ಡಿ.ಎಸ್.ಹುಲಗೇರಿ, ಭೋಸ್‌ರಾಜ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News