ಸಿದ್ದರಾಮಯ್ಯರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ನಾಗೇಂದ್ರ

Update: 2019-02-15 12:03 GMT

ಬೆಂಗಳೂರು, ಫೆ.15: ಕಾಂಗ್ರೆಸ್ ಅತೃಪ್ತ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ರಾಜ್ಯಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಶುಕ್ರವಾರ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಸಿದ್ದರಾಮಯ್ಯನವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಕಳೆದ ಹಲವು ದಿನಗಳ ರಾಜಕೀಯ ವಿದ್ಯಮಾನಗಳು, ಈ ಕುರಿತು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿದ್ದ ಅತೃಪ್ತ ಶಾಸಕರು, ಶಾಸಕಾಂಗ ಸಭೆಗಾಗಲಿ, ಸದನಕ್ಕಾಗಲೀ ಹಾಜರಾಗಿರಲಿಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅತೃಪ್ತ ಶಾಸಕರ ಸ್ಥಾನ ಅನರ್ಹತೆಗೊಳಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದರು. ಇದರಿಂದ ವಿಚಲಿತರಾದ ಶಾಸಕರು ಕೊನೆ ಗಳಿಗೆಯಲ್ಲಿ ಸದನಕ್ಕೆ ಆಗಮಿಸಿ ಎಲ್ಲ ರಾಜಕೀಯ ಲೆಕ್ಕಾಚಾರವನ್ನು ಬದಲಾಯಿಸಿದ್ದರು.

ಈಗ ರಮೇಶ್ ಜಾರಕಿಹೊಳಿ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸನ್ನು ಆತಂಕಕ್ಕೆ ದೂಡುವಂತಹ ಯತ್ನ ಮಾಡುವುದಿಲ್ಲವೆಂಬ ಭರವಸೆ ನೀಡಿದ್ದಾರೆ ಎನ್ನಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News