ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಎಸ್‌ಡಿಪಿಐ ಪ್ರತಿಭಟನೆ

Update: 2019-02-15 11:51 GMT

ಮಂಗಳೂರು, ಫೆ.15: ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗೆ ಮಂಡಿಸಿದ್ದ ಬಜೆಟ್‌ನಲ್ಲಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿಯು ಶುಕ್ರವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಈ ಸಂದರ್ಭ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಕೃತ್ಯವನ್ನು ಖಂಡಿಸಲಾಯಿತಲ್ಲದೆ, ಮಡಿದ 50 ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸಲಾಯಿತು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಮುಖ್ಯಭಾಷಣಗೈದರು. ಎಸ್‌ಡಿಪಿಐ ಮುಖಂಡರಾದ ಆಲ್ಫಾನ್ಸೋ ಫ್ರಾಂಕೋ, ರಿಯಾಝ್ ಫರಂಗಿಪೇಟೆ, ಅಕ್ರಂ ಹಸನ್, ಅಬ್ದುಲ್ ಜಲೀಲ್ ಕೃಷ್ಣಾಪುರ, ಇಕ್ಬಾಲ್ ಐಎಂಆರ್, ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಶಾಹುಲ್ ಎಸ್.ಎಚ್.ಸ್ವಾಗತಿಸಿದರು. ಜಿಲ್ಲಾ ಸಮಿತಿಯ ಸದಸ್ಯ ಝಾಹಿದ್ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News