ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ನೇರ ಹೊಣೆ: ಶೋಭಾ ಕರಂದ್ಲಾಜೆ

Update: 2019-02-15 14:37 GMT

ಬೆಂಗಳೂರು, ಫೆ.15: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ನೇರ ಹೊಣೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಶುಕ್ರವಾರ ನಗರದ ಡಾಲರ್ಸ್‌ ಕಾಲನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಈ ಆತ್ಮಾಹುತಿ ದಾಳಿಯನ್ನು ಕೇಂದ್ರ ಸರಕಾರವು ಗಂಭೀರವಾಗಿ ಪರಿಗಣಿಸಬೇಕು ಎಂದರು.

ವಿಶ್ವದ ಎದುರು ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಪ್ರಧಾನಿ ನರೇಂದ್ರ ಮೋದಿ ಸಾಬೀತುಪಡಿಸಿದ್ದಾರೆ. ಆದುದರಿಂದ, ಪಾಕಿಸ್ತಾನವು ಹಿಂಬಾಗಿಲ ಮೂಲಕ ನಮ್ಮ ದೇಶದ ಮೇಲೆ ದಾಳಿ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗವು ಮಂಡ್ಯಕ್ಕೆ ತೆರಳಲಿದ್ದು, ಹುತಾತ್ಮ ಯೋಧ ಗುರು ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News