ಯುವ ಮತದಾರರಿಗೆ ಮತಯಂತ್ರಗಳ ಬಗ್ಗೆ ಅರಿವಿಗೆ ಕ್ರಮ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ

Update: 2019-02-15 16:11 GMT

ಉಡುಪಿ, ಫೆ.15: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಯುವ ಮತದಾರರು ಮತ್ತು ಹೊಸ ಮತದಾರರಿಗೆ ಇವಿಎಂ ಬಳಕೆ ಮತ್ತು ವಿವಿ ಪ್ಯಾಟ್‌ನ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಕಾಪು ಮತ್ತು ಉಡುಪಿ ವಿಧಾನಸಭಾ ವ್ಯಾಪ್ತಿಯ ಸೆಕ್ಟರ್ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು, ಪಿಡಿಓಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಬಿಎಲ್‌ಓಗಳಿಗೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಬಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಇವಿಎಂ ಮತ್ತು ವಿವಿಪ್ಯಾಟ್ ಬಳಕೆ ಕುರಿತ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಕಳೆದ ವಿಧಾನಸಬಾ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಲೋಕಸಭಾ ಉಪಚುನಾವಣೆ ಸಂದರ್ಭ ಮತದಾನ ಮಾಡಿರುವವರಿಗೆ ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಅರಿವು ಇದ್ದು, ಹೊಸದಾಗಿ ನೊಂದಣಿಯಾದ ಮತದಾರರರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಜಿಲ್ಲೆಯ ಪ್ರತಿ ಗ್ರಾಮ ಗಳಿಗೆ ತೆರಳಿ ಅಲ್ಲಿನ ಪ್ರತಿಯೊಬ್ಬರಿಗೂ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸ ಬೆಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಮಾತನಾಡಿ, ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಪಾತಿತ್ಯಕ್ಷಿಕೆ ಮೂಲಕ ಅರಿವು ಮೂಡಿಸಲು ವೇಳಾಪಟ್ಟಿ ಸಿದ್ದಪಡಿಸಲಾಗುತ್ತಿದ್ದು, ವೇಳಾಪಟ್ಟಿಯಂತೆ ಕಾರ್ಯ ನಿರ್ವಹಿಸಿ, ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗಿರುವ ಕಡೆಗಳಲ್ಲಿ ಕಾರಣ ತಿಳಿದು ಮತದಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್ ಇವಿಎಂ ಮತ್ತು ವಿವಿ ಪ್ಯಾಟ್ ಬಳಕೆ, ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು. ಇವಿಎಂ ಮತ ಯಂತ್ರಕ್ಕೆ ಇಂಟರ್‌ನೆಟ್‌ನ ಸಂಪರ್ಕ ಸಾಧ್ಯವಿಲ್ಲ. ಚಿಪ್ ಮೂಲಕ ಸಹ ಕನೆಕ್ಟ್ ಆಗುವುದಿಲ್ಲ. ವಿದ್ಯುತ್ ಸಂಪರ್ಕ ಇಲ್ಲವಾದರೂ ಕಾರ್ಯ ನಿರ್ವಹಿಸ ಲಿದೆ. ಹಾಗಾಗಿ ಈ ಯಂತ್ರದಲ್ಲಿ ದಾಖಲಾದ ಮೂಲಕ ಮತಗಳು ಸುರಕ್ಷಿತ ವಾಗಿುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು. ಉಡುಪಿ ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಸ್ವಾಗತಿಸಿ, ಕಾರ್ಯಕ್ರಮ ನಿರೂ ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News