ಏರೋ ಇಂಡಿಯಾ ಪ್ರದರ್ಶನ ಹಿನ್ನೆಲೆ: ಡ್ರೋಣ್ ಹಾರಾಟಕ್ಕೆ ತಡೆ

Update: 2019-02-15 16:11 GMT

ಬೆಂಗಳೂರು, ಫೆ.15: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ ಏರೋ ಇಂಡಿಯಾ-2019 ಫೆ.20ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಯಲಹಂಕ ವಾಯುಪಡೆ ನೆಲೆಯಲ್ಲಿ ಐದು ದಿನಗಳ ಏರೊ ಇಂಡಿಯಾ ಪ್ರದರ್ಶನ ನಡೆಯಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಯಲಹಂಕ ಸುತ್ತಮುತ್ತ ಹಾಗೂ ಬೆಂಗಳೂರು ನಗರದ ಕೆಲವೆಡೆ ಅನಧಿಕೃತ ಮಾನವ ರಹಿತ ಹಾರುವ ಯಂತ್ರಗಳು, ಮಾನವ ರಹಿತ ವೈಮಾನಿಕ ವಾಹನಗಳು, ಡ್ರೋಣ್, ಬಲೂನ್‌ಗಳು, ಕೃತಕ ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ.

ಈ ನಿರ್ಬಂಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News