ರಾಜ್ಯ ಬಜೆಟ್‌ನಲ್ಲಿ ಮುಸ್ಲಿಮರ ನಿರ್ಲಕ್ಷ ವಿರೋಧಿಸಿ ಎಸ್‌ಡಿಪಿಐ ಧರಣಿ

Update: 2019-02-15 16:13 GMT

ಉಡುಪಿ, ಫೆ. 15: ಕೋಮುವಾದಿ ಶಕ್ತಿಗಳನ್ನು ತೃಪ್ತಿಪಡಿಸುವುದಕ್ಕಾಗಿ ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಿದೆ. ಇದನ್ನು ಮರುಪರಿಶೀಲಿಸಿ ಅಲ್ಪಸಂಖ್ಯಾತ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಮೀಸಲಿಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಸ್‌ಡಿಪಿಐ ದ.ಕ. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಎಚ್ಚರಿಕೆ ನೀಡಿದ್ದಾರೆ.

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ಉಡುಪಿ ವತಿಯಿಂದ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಎದುರು ಶನಿವಾರ ನಡೆದ ಪ್ರತಿಭಟನಾ ಸಭೆಯನ್ನುದೆ್ದೀಶಿಸಿ ಅವರು ಮಾತ ನಾಡುತಿದ್ದರು.

ಸಮುದಾಯ, ಇಲಾಖೆಗೆ ನೀಡುವ ಅನುದಾನ ನಾವು ಕಟ್ಟಿದ ತೆರಿಗೆಯೇ ಹೊರತು ಯಾರ ಆಸ್ತಿ ಕೂಡ ಅಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿ ಸಾಧ್ಯವಾಗದಿ ದ್ದರೆ ರಾಜೀನಾಮೆ ನೀಡಿ. ಕೋಮುಶಕ್ತಿಗಳನ್ನು ಓಲೈಕೆ ಮಾಡುವ ಕುತಂತ್ರ ಹೆಚ್ಚು ಕಾಲ ನಡೆಯುವುದಿಲ್ಲ ಎಂದು ಅವರು ಟೀಕಿಸಿದರು.

 ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮಲ್ಪೆ ಮಾತನಾಡಿ, ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ತಮಗೆ ಆದಾಯ ಬರುವ ಇಲಾಖೆಗಳ ಬಗ್ಗೆ ಮಾತ್ರ ಮುತುವರ್ಜಿ ವಹಿಸಿ, ಹಿಂದುಳಿದವರ್ಗ, ಅಲ್ಪ ಸಂಖ್ಯಾತರ ಇಲಾಖೆಗಳನ್ನು ಕಡೆಗಣಿಸಲಾಗಿದೆ. ಈ ಬಾರಿ ಮುಸ್ಲಿಮರನ್ನು ಸಂಪೂರ್ಣ ಕಡೆಗಣಿಸಿ ಬಜೆಟ್ ಮಂಡನೆ ಮಾಡಲಾಗಿದೆ. ಮುಂದಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡದಿದ್ದರೆ ಅಧಿಕಾರದಲ್ಲಿರುವ ಪಕ್ಷಗಳ ರಾಜಕೀಯ ಅಂತ್ಯಕ್ಕೆ ನೀಡಿ ಹಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಮಿತಿ ಸದಸ್ಯ ಹನೀಫ್ ಮುಳೂರು, ನಝೀರ್ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News