×
Ad

ಕೋಟ ಕೊಲೆ: ರಾಘವೇಂದ್ರ ಕಾಂಚನ್ ಬಿಜೆಪಿ ಪಕ್ಷದಿಂದ ಅಮಾನತು

Update: 2019-02-15 21:44 IST

ಉಡುಪಿ, ಫೆ.15: ಕೋಟ ಮಣೂರು ಜೋಡಿ ಕೊಲೆ ಪ್ರಕರಣದ ಆರೋಪಿ ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್‌ನನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ರಾಘವೇಂದ್ರ ಕಾಂಚನ್ ಹೆಸರು ಕೋಟ ಕೊಲೆ ಪ್ರಕರಣದಲ್ಲಿ ಆರೋಪಿ ಎಂಬುದಾಗಿ ಹೆಸರಿಸಲ್ಪಟ್ಟಿರುವುದರಿಂದ ಅವರನ್ನು ತಕ್ಷಣದಿಂದ ಜಾರಿಗೆ ಬರು ವಂತೆ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಕಾರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News