ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಸ್ಥಳಾಂತರ

Update: 2019-02-15 16:43 GMT

ಉಡುಪಿ, ಫೆ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಅನುಷ್ಠಾನ ಸಂಸ್ಥೆ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಡುಪಿ ಇವರು ನಡೆಸುತ್ತಿರುವ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಪ್ರಸ್ತುತ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಕೇಂದ್ರವನ್ನು ಬನ್ನಂಜೆಯಲ್ಲಿರುವ ಪೋಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಸ್ಥಳಾಂತರಿಸಲಾಗುತ್ತಿದೆ.

ಹಿರಿಯ ನಾಗರಿಕರಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ಸೇವೆ 1090 ಮತ್ತು ದೂ.ಸಂ.0820-2526394ನ್ನು ಸಂಪರ್ಕಿಸುವಂತೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News