ಮೀನು ಲಾರಿಗಳ ಉಪಟಳ: 74 ವಾಹನಗಳ ಮೇಲೆ ಕೇಸು

Update: 2019-02-15 17:14 GMT

ಮಂಗಳೂರು, ಫೆ.15: ನಗರದಲ್ಲಿ ಮೀನಿನ ಲಾರಿಗಳು ನೀರನ್ನು ರಸ್ತೆಯಲ್ಲಿ ಚೆಲ್ಲಿ ಹೋಗುತ್ತಿರುವ ಪ್ರಕರಣದ ಮೇಲೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿದ 74 ವಾಹನಗಳ ಮೇಲೆ ಕೇಸು ದಾಖಲಿಸಿ, 7,200ರೂ. ದಂಡ ವಿಧಿಸಿದ್ದಾರೆ.

ಮೀನಿನ ಲಾರಿಗಳು ಚೆಲ್ಲುವ ನೀರಿನಿಂದ ವಾಹನ ಸವಾರರಿಗೆ, ಸಾರ್ವಜನಿಕರಿಗೆ ಹಾಗೂ ಹೆದ್ದಾರಿ ಬದಿಯಲ್ಲಿರುವ ಮಳಿಗೆಯವರಿಗೆ ತೊಂದರೆಯಾಗುತ್ತಿರುವ ಬಗ್ಗೆ ಫೋನ್-ಇನ್ ಕಾರ್ಯಕ್ರಮದಲ್ಲಿ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ವಾಹನಗಳ ಮೇಲೆ ಕೇಸು ದಾಖಲಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News