ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆ

Update: 2019-02-15 17:53 GMT

ಕೊಣಾಜೆ, ಫೆ. 15: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ದೇರಳಕಟ್ಟೆಯ ಕಣಚೂರು ಮೆಡಿಕಲ್ ಆಸ್ಪತ್ರೆಯಲ್ಲಿ ಶುಕ್ರವಾರ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಕಣಚೂರು ವಿದ್ಯಾಸಂಸ್ಥೆಯ ಅಧ್ಯಕ್ಷ ಯು.ಕೆ.ಮೋನು ಮಾತನಾಡಿ, ದೇಶದ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರ ಮೇಲೆ ನಡೆದ ಬಾಂಬ್ ದಾಳಿಯಿಂದಾಗಿ ಇಂದು ಇಡೀ ದೇಶವೇ ದುಃಖದಲ್ಲಿರುವಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಸಹಾಯಕ ಡೀನ್ ಡಾ.ಶ್ರೀಶಾ ಖಂಡಿಗಾ, ವೈದ್ಯಕೀಯ ಅಧೀಕ್ಷಕ ಡಾ.ದೇವಿ ಪ್ರಸಾದ್ ಶೆಟ್ಟಿ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News