ಯೋಧರ ಹತ್ಯೆ: ರಾಷ್ಟ್ರದ ದುಃಖದೊಂದಿಗೆ ಪಾಪ್ಯುಲರ್ ಫ್ರಂಟ್ ಭಾಗಿ- ಇ.ಅಬೂಬಕರ್

Update: 2019-02-15 17:59 GMT

ಹೊಸದಿಲ್ಲಿ, ಫೆ. 15: ಕಾಶ್ಮೀರದ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸಂಭವಿಸಿದ ಯೋಧರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮ್ಯಾನ್ ಇ.ಅಬೂಬಕರ್ ಆತಂಕ ವ್ಯಕ್ತಪಡಿಸಿದ್ದಾರೆ. 

ಮೃತಪಟ್ಟ ಯೋಧರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದು, ಈ ದಾಳಿಯನ್ನು ನಾವು  ಅತ್ಯಂತ ಕಟುವಾಗಿ ಖಂಡಿಸುತ್ತಿದ್ದೇವೆ, ಈ ದಾಳಿಯಲ್ಲಿ ನಮ್ಮ ಕೆಚ್ಚೆದೆಯ ಯೋಧರನ್ನು ನಾವು ಕಳೆದುಕೊಂಡಿರುವೆವು ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಹಿಂಸಾತ್ಮಕ ಘಟನೆಗಳ ಸಂಖ್ಯೆಯಲ್ಲಿ ಅಭೂತಪೂರ್ವ ಏರಿಕೆ ಕಂಡುಬಂದಿದ್ದು, ಇದು ತೀವ್ರ ಕಳವಳಕಾರಿ ವಿಷಯವಾಗಿದೆ ಮತ್ತು ಪ್ರಸ್ತುತ ಘಟನೆಯಲ್ಲಿ ಗಂಭೀರವಾದ ಭದ್ರತಾ ಲೋಪಗಳು ಕಂಡುಬಂದಿವೆ ಎಂದು ಅವರು ತಿಳಿಸಿದ್ದಾರೆ.

ಮುಂಬರುವ ಚುನಾವಣೆಯ ದೃಷ್ಟಿಯಿಂದ ರಾಜಕೀಯ ಲಾಭಕ್ಕಾಗಿ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳುವ ಬದಲು, ಇಂತಹ ಘಟನೆಗಳು ಪುನರಾವರ್ತಿಸದ ರೀತಿಯಲ್ಲಿ ಇವುಗಳನ್ನು ತನಿಖೆಗೊಳಪಡಿಸಬೇಕು ಮತ್ತು ಕೇಂದ್ರವು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇ ಅಬೂಬಕರ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News