ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Update: 2019-02-15 18:00 GMT

ಶಿವಮೊಗ್ಗ, ಫೆ. 15: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ 10 ವರ್ಷ ಕಾರಾಗೃಹ ವಾಸ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ 1 ನೇ ಹೆಚ್ಚುವರಿ ವಿಶೇಷ (ಪೋಕ್ಸೋ) ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದ ನಿವಾಸಿ ಧೋಬಿ ಶೇಖರಪ್ಪ (60) ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನ್ಯಾಯಾಧೀಶರಾದ ಕೆ.ಬಿ.ಶಿವಪ್ರಕಾಶ್‍ರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ವಕೀಲ ಎಸ್.ಕೆ.ಮೂರ್ತಿರಾವ್‍ರವರು ವಾದ ಮಂಡಿಸಿದ್ದರು.

ಘಟನೆ ಹಿನ್ನೆಲೆ: 2016 ರಲ್ಲಿ ದೋಭಿ ಶೆಖರಪ್ಪನು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಶೇಖರಪ್ಪನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಜೊತೆಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News