×
Ad

ಅಕ್ರಮ ಮರಳು ಸಾಗಾಟ: ಟಿಪ್ಪರ್ ವಶ

Update: 2019-02-15 23:57 IST

ಮಂಗಳೂರು, ಫೆ.15: ನಗರದ ಕಣ್ಣೂರು ಬಳಿ ಲಾರಿಯಲ್ಲಿ ಯಾವುದೇ ಸೂಕ್ತ ಪರವಾನಿಗೆ ಇಲ್ಲದೆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಟಿಪ್ಪರ್ ಲಾರಿಯನ್ನು ಮರಳು ಸಮೇತ ಮುಂದಿನ ಸೂಕ್ತಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಸ್ವಾಧೀನಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ಏಳು ಲಕ್ಷ ರೂ. ಎಂದು ತಿಳಿದುಬಂದಿದೆ.

ಮಂಗಳೂರು ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ನೇತೃತ್ವದ ರೌಡಿ ನಿಗ್ರಹದಳ ಕಾರ್ಯಾಚರಣೆ ನಡೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News