ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧ ಗುರು ಪಾರ್ಥಿವ ಶರೀರಕ್ಕೆ ಸಿಎಂ ಸಹಿತ ಗಣ್ಯರಿಂದ ಪುಷ್ಪ ನಮನ

Update: 2019-02-16 08:08 GMT

ಬೆಂಗಳೂರು, ಫೆ.16: ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ಹುತಾತ್ಮರಾದ ಮಂಡ್ಯದ ಯೋಧ ಗುರು ಪಾರ್ಥಿವ ಶರೀರ ಇಂದು ಮಧ್ಯಾಹ್ನ  ಬೆಂಗಳೂರಿನ ಎಚ್ ಎಎಲ್ ಗೆ ಆಗಮಿಸಿತು.

ಮಧ್ಯಾಹ್ನ 1:00 ಗಂಟೆಗೆ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರು ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.

 ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಎಂ.ಬಿ ಪಾಟೀಲ್, ಸಂಸದರಾದ  ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ , ರಾಜ್ಯ ಸಭಾ ಸದಸ್ಯರಾದ ರಾಜೀವ್ ಚಂದ್ರ ಶೇಖರ್, ಸಚಿವ ಎಚ್ ಕೆ ಪಾಟೀಲ್, ಮೇಯರ್ ಗಂಗಾಂಬಿಕೆ, ಶಾಸಕ ಅರವಿಂದ ಲಿಂಬಾವಳಿ, ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ,  ಡಿಐಜಿ ನೀಲಮಣಿ  ರಾಜು , ಸೇನಾ ಅಧಿಕಾರಿಗಳು  , ಸರಕಾರದ ಉನ್ನತ ಅಧಿಕಾರಿಗಳು ಮತ್ತಿತರ  ಗಣ್ಯರು ಪುಷ್ಪ ನಮನ ಸಲ್ಲಿಸಿದರು.  

ಗಣ್ಯರು ಪುಷ್ಪ ನಮನ ಸಲ್ಲಿಸಿದ ಬಳಿಕ 1:20ಕ್ಕೆ ಸೇನಾ ವಾಹನದಲ್ಲಿ ಗುರು ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News