ಯೋಧ ಗುರು ಕುಟುಂಬಕ್ಕೆ 25 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ: ಎಚ್.ಡಿ.ಕುಮಾರಸ್ವಾಮಿ

Update: 2019-02-16 13:00 GMT

ಬೆಂಗಳೂರು, ಫೆ.16: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಎಚ್.ಗುರು ಅವರ ಪತ್ನಿಗೆ ಕಾಯಂ ಉದ್ಯೋಗವೊಂದನ್ನು ಒದಗಿಸಲಾಗುವುದು ಹಾಗೂ ಅವರ ಕುಟುಂಬಕ್ಕೆ ಪರಿಹಾರವಾಗಿ 25 ಲಕ್ಷ ರೂ.ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ, ಜಿಲ್ಲಾಡಳಿತ ಯೋಧ ಗುರುವಿನ ಅಂತ್ಯಸಂಸ್ಕಾರಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾನೂ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲು ಸಂಜೆ ಮಂಡ್ಯಕ್ಕೆ ತೆರಳಲಿದ್ದೇನೆ. ಹಾಗೂ ಗುರುವಿನ ಕುಟುಂಬಕ್ಕೆ ಸರಕಾರ ಎಲ್ಲ ರೀತಿಯ ರಕ್ಷಣೆ ನೀಡಲಿದೆ ಎಂದು ಹೇಳಿದರು.

ಯೋಧನ ಪ್ರಾರ್ಥಿವ ಶರೀರವನ್ನು ಹುಟ್ಟೂರಿಗೆ ಕರೆದೊಯ್ಯಲು ರಕ್ಷಣಾ ಇಲಾಖೆಗೆ ಹೆಲಿಕಾಪ್ಟರ್‌ನ್ನು ಕೇಳಿದ್ದೆ. ಆದರೆ, ರಕ್ಷಣಾ ಇಲಾಖೆಯವರು ಹೆಚ್ಚಿನ ಸಂಖ್ಯೆಯಲ್ಲಿ ಯೋಧರು ಹುತಾತ್ಮರಾಗಿದ್ದರಿಂದ ಎಲ್ಲರ ಮೃತದೇಹಗಳಿಗೂ ಹೆಲಿಕಾಪ್ಟರ್‌ನ್ನು ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ರಸ್ತೆಯ ಮೂಲಕವೇ ಯೋಧನ ಪ್ರಾರ್ಥಿವ ಶರೀರವನ್ನು ಹುಟ್ಟೂರಿಗೆ ಕರೆದೊಯ್ಯಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News