×
Ad

ಆಪರೇಷನ್ ಆಡಿಯೋ ಪ್ರಕರಣ: ಯಡಿಯೂರಪ್ಪ ಸೇರಿ ನಾಲ್ವರಿಗೆ ನಿರೀಕ್ಷಣಾ ಮಧ್ಯಂತರ ಜಾಮೀನು

Update: 2019-02-16 19:48 IST

ಬೆಂಗಳೂರು, ಫೆ.16: ಆಪರೇಷನ್ ಕಮಲ ಧ್ವನಿ ಸುರುಳಿ ಪ್ರಕರಣದಲ್ಲಿ ಸಿಲುಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್‌ನ 82ನೆ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫೆ.13ರಂದು ದೇವದುರ್ಗದಲ್ಲಿ ಶರಣಗೌಡ ಅವರು ರೆಕಾರ್ಡ್ ಮಾಡಿಕೊಂಡಿದ್ದ ಆಪರೇಷನ್ ಕಮಲದ ಧ್ವನಿ ಸುರುಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಶರಣಗೌಡ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್, ಶುಕ್ರವಾರ ಜಾಮೀನು ಅರ್ಜಿ ಸಲ್ಲಿಸಿದ್ದರು. ಶನಿವಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿ ಇತರ ನಾಲ್ವರಿಗೂ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದ್ದಾರೆ.

ವೈಯಕ್ತಿಕ 1 ಲಕ್ಷ ಬಾಂಡ್, ಸಾಕ್ಷಿ ನಾಶ ಮಾಡಬಾರದು. ತನಿಖೆಗೆ ಸಹಕರಿಸಬೇಕು ಹಾಗೂ ಮಾಹಿತಿ ಇಲ್ಲದೆ ಬೇರೆಡೆ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಜಾಮೀನು ಮಂಜೂರು ನಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News