ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

Update: 2019-02-16 14:27 GMT

ಉಡುಪಿ, ಫೆ.16: ರಾಷ್ಟ್ರೀಯ, ಕರ್ನಾಟಕ ರಾಜ್ಯ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ವತಿಯಿಂದ ಉಡುಪಿ ಜಿಲ್ಲಾ ಮತ್ತು ಕುಂದಾಪುರ ಹಾಗೂ ಕಾರ್ಕಳ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿ ಮಾ.9, ಜು.13, ಸೆ.14 ಮತ್ತು ಡಿ.14ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಈ ಮುಂದಿನ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಚೆಕ್ ಅಮಾನ್ಯದ ಪ್ರಕರಣಗಳು ಯು/ಎಸ್ 138, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣ ಗಳು ಯು/ಎಸ್ 138, ಬ್ಯಾಂಕ್ ಪ್ರಕರಣಗಳು, ಮೊಟಾರ್ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು( ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳು( ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಂಧಾಜ್ಞೆ ಮೊಕದ್ದಮೆ ಗಳು) ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾಗಿವೆ.

ಈ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಿಕೊಳ್ಳು ವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News