ಫೆ. 24ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ‘ಭರವಸೆ’

Update: 2019-02-16 14:32 GMT

ಉಡುಪಿ, ಫೆ.16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನ, ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗಮೇಳ ‘ಭರವಸೆ’ ಕಾರ್ಯಕ್ರಮವು ಫೆ.24ರಂದು ಬೆಳಗ್ಗೆ 9 ಗಂಟೆಗೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಈ ಉದ್ಯೋಗ ಮೇಳದ ಅಂಗವಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಮತ್ತು ಸಂದರ್ಶನ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರವು ಫೆ.17ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ವಾಗಿ ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಉದ್ಯೋಗಾಕಾಂಕ್ಷಿಗಳ ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯ ದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸೆಸೆಲ್ಸಿ/ ಪಿಯುಸಿ/ ಯಾವುದೇ ಪದವಿ/ ಡಿಪ್ಲೋಮಾ ಐಟಿಐ/ ಸ್ನಾತ್ತಕೋತ್ತರ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ/ ರೆಸ್ಯೂಮ್ (ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಫೆ.24ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗು ವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News