ರಾಜ್ಯಾದ್ಯಂತ ಮಾ.10 ರಂದು ಪಲ್ಸ್ ಪೋಲಿಯೋ

Update: 2019-02-16 14:57 GMT

ಬೆಂಗಳೂರು, ಫೆ.16: ರಾಷ್ಟ್ರೀಯ ಲಸಿಕಾ ದಿನವಾದ ಮಾ.10ರಂದು ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಭಾರತವು ಪೋಲಿಯೋ ಮುಕ್ತ ರಾಷ್ಟ್ರವೆಂಬ ಬಿರುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ 2014ರಲ್ಲಿ ಪಡೆದುಕೊಂಡಿತು. 2018ರಲ್ಲಿ ಅಫ್ಘಾನಿಸ್ತಾನದಲ್ಲಿ 21 ಹಾಗೂ ಪಾಕಿಸ್ತಾನದಲ್ಲಿ 12 ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ, ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲು 32,571 ಬೂತ್‌ಗಳನ್ನು ತೆರೆಯಲಾಗಿದೆ. ಅಂದಾಜು 64,85,980 ಮಕ್ಕಳಿಗೆ 1,10,351 ಲಸಿಕಾ ಕಾರ್ಯಕರ್ತೆಯರು ಲಸಿಕೆ ಹಾಕುವರು. ಅಲ್ಲದೆ, 6047 ಮೇಲ್ವಿಚಾರಕರು, 952 ಸಂಚಾರಿ ತಂಡ ಹಾಗೂ 2170 ಟ್ರಾನ್ಸಿಟ್ ತಂಡಗಳು ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲಿದ್ದಾರೆ. ಈ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆಯಿಂದ ಯಾವೊಬ್ಬ ಮಕ್ಕಳು ಸಹ ದೂರ ಉಳಿಯದಂತೆ ಕ್ರಮ ವಹಿಸಲು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಇಲಾಖಾ ಮುಖ್ಯಸ್ಥರು, ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News