ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2019-02-16 16:14 GMT

ಮಣಿಪಾಲ, ಫೆ.16: ಪೆರಂಪಳ್ಳಿ ಎಂಬಲ್ಲಿ ಫೆ.14ರ ಬೆಳಗ್ಗೆ 6ಗಂಟೆಯಿಂದ ಪೆ.15ರ ಬೆಳಗ್ಗೆ 10 ಗಂಟೆಯ ಮಧ್ಯಾವಧಿಯಲ್ಲಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ರಾಮಕೃಷ್ಣ ಭಟ್ ಮನೆಗೆ ಬೀಗ ಹಾಕಿ ಬೆಂಗಳೂರಿಗೆ ತೆರಳಿದ್ದು, ಈ ವೇಳೆ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು, ಮನೆಯೊಳಗಿದ್ದ 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಅಲ್ಲದೆ ನೆರೆಮನೆಯ ಮುಂಬಾಗಿಲನ್ನು ಕೂಡ ಜಖಂಗೊಳಿಸಿದ ಕಳ್ಳರು ಮನೆಯ ಕಳವಿಗೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News