ಬೀದರ್ ಜಿ.ಪಂ. ಅಧ್ಯಕ್ಷೆ-ಉಪಾಧ್ಯಕ್ಷ ಕಾಂಗ್ರೆಸ್‌ನಿಂದ ಉಚ್ಛಾಟನೆ

Update: 2019-02-16 16:35 GMT

ಬೆಂಗಳೂರು, ಫೆ.16: ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭರತ್ ಬಾಯಿ ಹಾಗೂ ಉಪಾಧ್ಯಕ್ಷ ಪ್ರಕಾಶ್ ಪಾಟೀಲ್ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಫೆ.15ರಂದು ಮಂಡಿಸಿದ್ದು, ಅದರಲ್ಲಿ ಪಕ್ಷಭೇದ ಮರೆತು ಅವಿಶ್ವಾಸ ನಿರ್ಣಯಕ್ಕೆ 23 ಜಿಲ್ಲಾ ಪಂಚಾಯತ್ ಸದಸ್ಯರು ವಿಶ್ವಾಸ ನಿರ್ಣಯವನ್ನು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಫಿಉಲ್ಲಾ ತಿಳಿಸಿದ್ದಾರೆ.

ಈ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಪರಾಭವಗೊಂಡಿರುವ ಇವರು, ಪಕ್ಷದ ತತ್ವ-ಸಿದ್ಧಾಂತದ ವಿರುದ್ಧವಿದ್ದು, ವಿಪ್ ಜಾರಿ ಮಾಡಿದ್ದರೂ ಅದನ್ನು ಉಲ್ಲಂಘನೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಇವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾಗೂ ಹುದಿಗಿ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಪ್ರಿಯಾ ಸಂಜಯ್‌ಸಿಂಗ್ ಠಾಕೂರ್, ಸಹ ಪಕ್ಷದ ತತ್ವ-ಸಿದ್ಧಾಂತದವನ್ನು ಉಲ್ಲಂಘನೆ ಮಾಡಿ ಹಾಗೂ ವಿಪ್ ಜಾರಿ ಮಾಡಿದ್ದರೂ ಸಭೆಗೆ ಹಾಜರಾಗದೆ ಶಿಸ್ತು ಉಲ್ಲಂಘನೆ ಮಾಡಿರುವುದರಿಂದ ಇವರನ್ನು ಸಹ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News