ಗೆಜೆಟೆಡ್ ಪ್ರೊಬೆಷನರ್ಸ್‌ ಹುದ್ದೆಗಳ ನೇಮಕಾತಿ: ಫೆ.28ರಿಂದ ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ

Update: 2019-02-16 16:50 GMT

ಬೆಂಗಳೂರು, ಫೆ.16: 2015 ನೆ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್‌ ಗ್ರೂಫ್ ಎ ಮತ್ತು ಗ್ರೂಫ್ ಬಿ ವೃಂದದ ಒಟ್ಟು 428 ಹುದ್ದೆಗಳ ನೇಮಕಾತಿಯ ಸಂಬಂಧ ಸಂದರ್ಶನಕ್ಕೆ 1:5 ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. 

ಪ್ರಸ್ತುತ ಮೂಲ ದಾಖಲೆಗಳ ಪರಿಶೀಲನೆಯನ್ನು ಫೆ.28 ರಿಂದ ಮಾ.14ರವರೆಗೆ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರವನ್ನು ಪ್ರತ್ಯೇಕವಾಗಿ ರವಾನಿಸಲಾಗಿದ್ದು, ಸದರಿ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗಾಗಿ ಆಯೋಗದ ಕೇಂದ್ರ ಕಚೇರಿ, ಉದ್ಯೋಗ ಸೌಧ, ಬೆಂಗಳೂರು ಇಲ್ಲಿ ಸೂಚಿತ ದಿನಾಂಕ ಹಾಗೂ ಸಮಯದಂದು ತಪ್ಪದೇ ಹಾಜರಾಗಬೇಕು. ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರ ಸ್ವೀಕತವಾಗದಿದ್ದಲ್ಲಿ ಸಂಬಂಧಿತ ದಾಖಲೆಗಳೊಂದಿಗೆ ಕೇಂದ್ರ ಕಚೇರಿಯನ್ನು ಮೂಲ ದಾಖಲೆಗಳ ಪರಿಶೀಲನೆಗೆ ನಿಗದಿಪಡಿಸಿರುವ ದಿನಾಂಕದೊಳಗೆ ಸಂಪರ್ಕಿಸಲು ಆಯೋಗದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News