ಮಾ. 1ರಿಂದ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

Update: 2019-02-16 18:03 GMT

ಮಂಗಳೂರು, ಫೆ.16: ಎಚ್‌ಕೆಎ ಬಾವಾ ಮೆಮೋರಿಯಲ್ ಟ್ರಸ್ಟ್‌ನ ಪ್ರಯೋಜಕತ್ವದಲ್ಲಿ ಮಾರ್ಚ್ 1ರಿಂದ ಉಳ್ಳಾಲದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಉಳ್ಳಾಲ ಮಾಸ್ತಿಕಟ್ಟೆಯ ಭಾರತ್ ಶಾಲೆಯ ವಾಣಿಜ್ಯ ಕಟ್ಟಡದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನದ 2 ಬ್ಯಾಚ್‌ಗಳಲ್ಲಿ ನೀಡಲಾಗುವ ಈ ತರಬೇತಿ ಶಿಬಿರಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊ. 8722263057ನ್ನು ಸಂಪರ್ಕಿಸಬಹುದು ಎಂದು ಟ್ರಸ್ಟ್‌ನ ಗೌರವ ಕಾರ್ಯದರ್ಶಿ ನಿಸಾರ್ ಮುಹಮ್ಮದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News