ಭಗವಾನ್, ಅನಂತಕುಮಾರ್ ಹೆಗಡೆ, ಪ್ರತಾಪ್‌ ಸಿಂಹಗೆ ಗೃಹ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ !

Update: 2019-02-17 14:14 GMT

ವಿಜಯಪುರ, ಫೆ.17: ಹಿರಿಯ ಸಾಹಿತಿ ಕೆ.ಎಸ್.ಭಗವಾನ್, ಸಂಸದರಾದ ಅನಂತಕುಮಾರ್ ಹೆಗಡೆ, ಪ್ರತಾಪ್ ಸಿಂಹ ಸೇರಿದಂತೆ ಎಲ್ಲರೂ ವಾಕ್ ಸ್ವಾತಂತ್ರ್ಯದ ಮಿತಿಯೊಳಗೆ ಮಾತನಾಡಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಮೀರುವವರ ವಿರುದ್ಧ ಕ್ರಮಕ್ಕೆ ಇಲಾಖೆಯಲ್ಲಿ ಆಂತರಿಕವಾಗಿ ಚರ್ಚಿಸಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಪ್ರಚೋದನಕಾರಿ ಮಾತನಾಡಿದರೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ದೇಶದ ಬಗ್ಗೆ ಅಭಿಮಾನ ಇರಬೇಕು. ಆದರೆ, ಅನಗತ್ಯ ಪೋಸ್ಟ್ ಸಮಾಜದ ಅಶಾಂತಿ ಸೃಷ್ಟಿಸುವವರ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಪುಲ್ವಾಮದಲ್ಲಿ ಉಗ್ರರು ನಡೆಸಿರುವುದು ಹೇಯ ಕೃತ್ಯವಾಗಿದೆ. ಇದನ್ನು ಯಾರೂ ಕ್ಷಮಿಸಲ್ಲ. ಉಗ್ರರ ವಿರುದ್ಧ ದಿಟ್ಟ ನಿಲುವನ್ನು ತೆಗೆದುಕೊಂಡು ಶಾಶ್ವತವಾಗಿ ಹತ್ತಿಕ್ಕಬೇಕಿದೆ. ಜಗತ್ತಿನ ಎಲ್ಲ ರಾಷ್ಟ್ರಗಳು ಸೇರಿ ಪಾಕಿಸ್ತಾನದ ವಿರುದ್ಧ ಒಂದು ನಿರ್ಧಾರ ಮಾಡಬೇಕಿದೆ. ಉಗ್ರರ ದಾಳಿಯಲ್ಲಿ ವೀರ ಮರಣವೊಂದಿರುವ ಕರ್ನಾಟಕದ ಹೆಮ್ಮೆಯ ಯೋದನಿಗೆ  ಸರಕಾರದಿಂದ 25 ಲಕ್ಷ ರೂ. ಹಾಗೂ ಯೋಧನ ಪತ್ನಿಗೆ ಸರಕಾರಿ ಉದ್ಯೋಗ ಕೊಡಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News