ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್: 13 ಮಂದಿ ಸಾವು

Update: 2019-02-19 05:10 GMT

ಪ್ರತಾಪಗಢ (ರಾಜಸ್ಥಾನ), ಫೆ. 19: ಮದುವೆ ದಿಬ್ಬಣ ಮೆರವಣಿಗೆಯ ಮೇಲೆ ಟ್ರಕ್ ಹರಿದು 13 ಮಂದಿ ಮೃತಪಟ್ಟು, ಇತರ 15 ಮಂದಿ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಪ್ರತಾಪಗಢ- ಜೈಪುರ ಹೆದ್ದಾರಿಯಲ್ಲಿ ಅಂಬವಾಲಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ದಿಬ್ಬಣದ ಮಂದಿ ಹೆದ್ದಾರಿಯ ಬದಿ "ಬಿಂದೋಲಿ" ಅಂಗವಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟರು. ವಧು ಸೇರಿದಂತೆ 15 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಥದ್ದೇ ಘಟನೆಯಲ್ಲಿ ಅತಿವೇಗವಾಗಿ ಬಂದ ಟ್ರಕ್ ಟ್ಯಾಕ್ಸಿಗೆ ಢಿಕ್ಕಿ ಹೊಡೆದ ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಅಶೋಕನಗರ ಜಿಲ್ಲೆಯಲ್ಲಿ ರವಿವಾರ ಸಂಭವಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News