ಕುಷ್ಠರೋಗ ಆರಂಭಿಕ ಹಂತದಲ್ಲೇ ಗುರುತಿಸಿದರೆ ಗುಣಪಡಿಸಲು ಸಾಧ್ಯ: ಡಾ.ರೋಹಿಣಿ

Update: 2019-02-19 12:43 GMT

ಉಡುಪಿ, ಫೆ.19: ಕುಷ್ಠರೋಗ ಗುಣಲಕ್ಷಣಗಳನ್ನು ಆರಂಭಿಕ ಹಂತದಲ್ಲೆ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿದರೆ ರೋಗಿ ಸಂಪೂರ್ಣ ಗುಣಮುಖನಾಗಲು ಸಾಧ್ಯ. ಈ ನಿಟ್ಟಿನಲ್ಲಿ ಕುಷ್ಠರೋಗದ ಕುರಿತು ಜಾಗೃತಿ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಹಿಳ ದೌರ್ಜನ್ಯ ತಡೆ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಆಯೋಜಿಸಲಾದ ಕುಷ್ಠರೋಗ ನಿವಾರಣಾ ದಿನಾಚರಣೆ ಮತ್ತು ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಸುರೇಂದ್ರ ಚಿಂಬಾಲ್ಕರ್ ಕುಷ್ಠರೋಗದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ವಿಜಯ ಬಾಯಿ, ಫಿಸಿಯೋ ಥೆೆರಪಿಸ್ಟ್ ಸುಕುಮಾರ ನಾಯ್ಕ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ಮೊದಲಾದವರು ಉಪಸ್ಥಿ ತರಿದ್ದರು. ಮಹಿಳಾ ದೌರ್ಜನ್ಯ ತಡೆ ಸಮಿತಿ ಸಂಚಾಲಕಿ ಜಯಮಂಗಳಾ ಸ್ವಾಗತಿಸಿ, ವಿದ್ಯಾರ್ಥಿನಿ ಅರ್ಪಿತಾ ನಿರೂಪಿಸಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ. ರಾಜೇಂದ್ರ ಕೆ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News