ಕುತ್ಪಾಡಿ: ‘ಅನ್ವೇಷಣಾ’ ರಾಜ್ಯಮಟ್ಟದ ಕಿರು ಸಮ್ಮೇಳನ

Update: 2019-02-19 12:44 GMT

ಉಡುಪಿ, ಫೆ.19: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ ಕಾಯಚಿಕಿತ್ಸಾ ಮತ್ತು ಮಾನಸರೋಗ ಹಾಗೂ ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಜಂಟಿ ಆಶ್ರಯದಲ್ಲಿ ‘ಅನ್ವೇಷಣಾ -2019’ ಎರಡು ದಿನಗಳ ರಾಜ್ಯಮಟ್ಟದ ಕಿರು ಸಮ್ಮೇಳನವು ಇತ್ತೀಚೆಗೆ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಿತು.

ಸಮ್ಮೇಳನವನ್ನು ಮೈಸೂರು ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಾ.ಜಿ.ಶ್ರೀನಿವಾಸ ಆಚಾರ್ಯ ವಹಿಸಿದ್ದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ., ಸ್ನಾತಕೋತ್ತರ ವಿಭಾಗದ ಸಹಾಯಕ ಮುಖ್ಯಸ್ಥ ಡಾ.ನಾಗರಾಜ ಎಸ್., ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವೀರಕುಮಾರ ಕೆ. ಉಪಸ್ಥಿತರಿದ್ದರು. ಕಾಯಚಿಕಿತ್ಸಾ ಮತ್ತು ಮಾನಸರೋಗ ವಿಭಾಗ ಮುಖ್ಯಸ್ಥೆ ಡಾ.ಶ್ರೀಲತಾ ಕಾಮತ್ ಸ್ವಾಗತಿಸಿ ದರು. ಸಹಪ್ರಾಧ್ಯಾಪಕರಾದ ಡಾ.ವಿಜಯೇಂದ್ರ ಭಟ್ ವಂದಿಸಿದರು. ಡಾ. ಅರುಣ್ ಕುಮಾರ್ ಹಾಗೂ ಡಾ.ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ: ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ರವಿಶಂಕರ್ ಬಿ., ಡಾ.ಲಕ್ಷ್ಮೀನಾರಾಯಣ ಶೆಣೈ ಭಾಗವಹಿಸಿದ್ದರು. ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಡಾ.ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ನಿರಂಜನ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ.ಸುಚೇತ ಕುಮಾರಿ ಉಪಸ್ಥಿತರಿದ್ದರು. ಡಾ.ವೀರಕುಮಾರ ಕೆ. ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಧನೇಶ್ವರಿ ಎಚ್.ಎ. ವರದಿಯನ್ನು ವಾಚಿಸಿದರು. ಡಾ. ನಿಶಾಂತ್ ಪೈ ವಂದಿಸಿದರು. ಡಾ.ಅರ್ಹಂತ್ ಕುಮಾರ್ ಹಾಗೂ ಡಾ. ನಿವೇದಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮ್ಮೇಳನದಲ್ಲಿ ರಾಜ್ಯದ 185 ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಆಯುರ್ವೇದ ವೈದ್ಯರು ಭಾಗವಹಿಸಿ ದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News