ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ, ಸಾಹಿತ್ಯ ಪರಿಷತ್ ಅಸ್ತಿತ್ವಕ್ಕೆ

Update: 2019-02-19 14:11 GMT

ಉಡುಪಿ, ಫೆ.19: ಉಡುಪಿ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯದ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್‌ನ್ನು ರಚಿಸಲಾಯಿತು.

ಉಡುಪಿ ರೆಸಿಡೆನ್ಸಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪರಿಷತ್‌ನ ಲಾಂಛನವನ್ನು ಬಿಡುಗಡೆಗೊಳಿಸಿದ ಜಿಲ್ಲಾಧ್ಯಕ್ಷ ಎಸ್.ಪಿ.ಉಮರ್ ಪಾರೂಕ್ ಮಾತನಾಡಿ, ಮರೆಯಾಗುತ್ತಿರುವ ಬ್ಯಾರಿ ಸಮುದಾಯದ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕಾದ ಅಗತ್ಯ ಇದೆ. ಸಾಹಿತಿಕವಾಗಿಯೂ ಶ್ರೀಮಂತಿಕೆ ಹೊಂದಿರುವ ಈ ಭಾಷೆಯ ಬೆಳವಣಿಗೆಗೆ ಅಕಾಡಮಿ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.

ಯುವಸಮುದಾಯಕ್ಕೆ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲಾ ತಾಲೂಕಿನಲ್ಲೂ ಸಂಘಟನೆಯನ್ನು ಅಸಿಸ್ತಿತ್ವಕ್ಕೆ ತರುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯ ಪರಿಷತ್‌ನೊಂದಿಗೆ ಕೈಜೋಡಿಸಬೇಕಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಇಸ್ಮಾಯಿಲ್ ಬ್ಯಾರಿ ಕಟಪಾಡಿ, ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮಣಿಪಾಲ, ರಫೀಕ್ ಬಿ.ಎಸ್. ಗಂಗೊಳ್ಳಿ, ಮುಹಮ್ಮದ್ ಶರೀಫ್ ಕಾರ್ಕಳ, ಮನ್ಸೂರ್ ಮರವಂತೆ, ಕಾರ್ಯದರ್ಶಿ ಹಬೀಬ್ ಆಲಿ, ಕೋಶಾಧಿಕಾರಿ ಖಾಸಿಂ ಬಾರ್ಕೂರು, ಸಂಘಟನಾ ಕಾರ್ಯದರ್ಶಿ ಇಸ್ಮಾಯೀಲ್ ಆತ್ರಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ಶೌಕತ್ ಪಡುಬಿದ್ರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News