ಪ್ರಕಾಶ್ ರೈಗೆ ನಮ್ಮ ಬೆಂಬಲವಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು,ಫೆ.19: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಹಿರಿಯ ನಟ ಪ್ರಕಾಶ್ ರೈ, ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿ ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಹಿರಿಯ ನಟ ಪ್ರಕಾಶ್ ರೈ, ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿ ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲ ಕೊಡಿ ಎಂದು ಪ್ರಕಾಶ್ ರೈ ಕೇಳಿದರೆ ಆಗುವುದಿಲ್ಲ. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಈ ಬಗ್ಗೆ ನಾವು ವಿಚಾರ ಮಾಡಬಹುದು. ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷೇತರರಿಗೆ ಬೆಂಬಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಪ್ರಕಾಶ್ ರೈ ಸಿದ್ದರಾಮಯ್ಯ ಜೊತೆಗೆ, ನನ್ನನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರು ಪಕ್ಷೇತರವಾಗಿಯೇ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ನಾವು ಯಾವ ಯಾವ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೋ, ಆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.