×
Ad

ಮೂರು ಬೆಲೆಬಾಳುವ ಬೈಕ್‌ ಕಳ್ಳತನ

Update: 2019-02-19 21:32 IST

ಬೆಂಗಳೂರು, ಫೆ.19: ನಗರ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೆಲೆಬಾಳುವ ಬೈಕ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಇಲ್ಲಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಮಾಕ್ಷಿ ಪಾಳ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡು ಈ ಕಳವು ಮಾಡಲಾಗಿದೆ. ದುಷ್ಕರ್ಮಿಗಳು ಮೂರು ಬೈಕ್‌ಗಳನ್ನು ಕದ್ದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ಬೈಕ್‌ಗಳ ಕಳ್ಳತನ ನಡೆದಿದ್ದು, ಬೈಕ್‌ಗಳ ವಾರಸುದಾರರು ಪೊಲೀಸರ ಮೊರೆ ಹೋಗಿದ್ದರೂ ಬೈಕ್‌ಗಳು ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News