ಜೆಡಿಎಸ್ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದೆ: ಸಚಿವ ಸಿ.ಎಸ್ ಪುಟ್ಟರಾಜು

Update: 2019-02-19 17:15 GMT

ಪಾಂಡವಪುರ, ಫೆ.19: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸೀಟು ಹಂಚಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ಚಿನಕುರಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸೀಟು ಹಂಚಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೂ ಜೆಡಿಎಸ್ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದೆ ಎಂದರು. ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಜೆಡಿಎಸ್ ರಣತಂತ್ರ ಹೆಣೆದಿದೆ. ಹೀಗಾಗಿ ಸೀಟು ಹಂಚಿಕೆ ಮಾಡಲಿ, ಬಿಡಲಿ ಜೆಡಿಎಸ್ ಚುನಾವಣೆ ಎದುರಿಸಲು ಸಿದ್ದವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಪುಟ್ಟರಾಜು, ದೇವೇಗೌಡರ ಸ್ಪರ್ಧೆ ವಿಚಾರ ಇನ್ನೂ ಸ್ಪಷ್ಟ ತೀರ್ಮಾನವಾಗಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲಿ, ಮಾಡಿಕೊಳ್ಳದಿರಲೀ ಜೆಡಿಎಸ್ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ರಿಕ್ರಿಯಿಸಿದ ಸಚಿವ ಪುಟ್ಟರಾಜು, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಅವರ ಹೆಸರು ಚಾಲ್ತಿಯಲ್ಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರೂ ಕೂಡ ಚಾಲ್ತಿಯಲ್ಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News