ಪುತ್ತೂರು ಕೃಷಿಯಂತ್ರ ಮೇಳಕ್ಕೆ ಕೇಂದ್ರ ಕಾನೂನು ಸಚಿವರಿಂದ ಚಾಲನೆ

Update: 2019-02-20 14:50 GMT

ಪುತ್ತೂರು, ಫೆ. 20: ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಫೆ. 23-25ರ ತನಕ ನಡೆಯಲಿರುವ ಕೃಷಿ ಯಂತ್ರ ಮೇಳಕ್ಕೆ  ಫೆ. 23ರಂದು 10.30ಕ್ಕೆ ಕೇಂದ್ರ ಕಾನೂನು ಸಚಿವ ಪಿ.ಪಿ.ಚೌಧರಿ ಚಾಲನೆ ನೀಡಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಮ್ ಕೃಷ್ಣ ಭಟ್ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಭಾರತ ಸರಕಾರದ ವಿಶ್ರಾಂತ ಕಾರ್ಯದರ್ಶಿ ವಿ.ವಿ.ಭಟ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರಲ್ ರೀಸರ್ಚ್ ಸಂಸ್ಥೆಯ ನಿರ್ದೇಶಕ ಡಾ. ಎಂ.ಆರ್ ದಿನೇಶ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಬಿ.ವೈ ರಾಘವೇಂದ್ರ, ಶಾಸಕ ಸಂಜೀವ ಮಠಂದೂರು, ಕೆನರಾ ಬ್ಯಾಂಕ್‍ನ ಜನರಲ್ ಮೆನೇಜರ್ ಲಕ್ಷ್ಮೀನಾರಾಯಣ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ. ಫೆ. 25ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಫೆ. 24ರಂದು ಸಂಜೆ 6 ರಿಂದ 7 ರ ತನಕ ಗಾನಸರಸ್ವತಿ ಸಂಗೀತ ಕಲಾ ಶಾಲೆ, ನೆಹರುನಗರ ಇವರಿಂದ ಸಂಗೀತ, ಗಂಟೆ 7 ರಿಂದ 8.30ರ ತನಕ ಬಡಗುತಿಟ್ಟಿನ ಜನ್ಸಾಲೆ ರಾಘವೇಂದ್ರ ಆಚಾರ್ ಹಾಗೂ  ತಂಡದವರಿಂದ ಯಕ್ಷಗಾನ ವೈವಿಧ್ಯ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ರಾವ್ ಪಿ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಸಂಚಾಲಕ ಸಿ.ಮಹಾದೇವ ಶಾಸ್ತ್ರೀ ಮಣಿಲ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಇಂಜಿನಿಯರಿಂಗ್ ಕಾಲೇಜಿನ ವಿವೇಕ್ ಭಂಡಾರಿ, ಕ್ಯಾಂಪ್ಕೋ ಸಂಸ್ಥೆಯ ಎಜಿಎಮ್ ಶ್ಯಾಮ ಪ್ರಸಾದ್, ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ರಾಕೇಶ್ ಕಮ್ಮಾಜೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News