ಉಡುಪಿ: ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Update: 2019-02-20 15:38 GMT

ಉಡುಪಿ, ಫೆ.20: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನಿಂದ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಿದೆ.

ಮೊದಲ ಹಂತದಲ್ಲಿ ಆಯ್ದ 6 ಶೈಕ್ಷಣಿಕ ವಿಭಾಗಗಳಲ್ಲಿ ವಿಭಾಗ ಮಟ್ಟದ ಸ್ಪರ್ಧೆಯನ್ನು ಮತ್ತ ಎರಡನೆಯ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆಯ ಅಂಗವಾಗಿ ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ಎಂಬ ಕೇಂದ್ರ ವಿಷಯದಡಿ 5 ಉಪ ಶೀರ್ಷಿಕೆ ಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳು ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸ ಲಿದ್ದಾರೆ. ವಿಭಾಗ ಮಟ್ಟದ ಸ್ಪರ್ಧೆಯನ್ನು ಮಾರ್ಚ್ ತಿಂಗಳಿನಲ್ಲಿ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯನ್ನು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಆಯೋಜಿಸ ಲಾಗುವುದು.

ಉಪ ಶೀರ್ಷಿಕೆಗಳು: ಶುದ್ಧ ಮತ್ತು ಹಸಿರು ಶಕ್ತಿ, ಆಹಾರ ಆರೋಗ್ಯ ಮತ್ತು ನೈರ್ಮಲ್ಯ, ಬಾಹ್ಯಾಕಾಶ ಹುಡುಕಾಟ, ಪರಿಸರ ಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ಬಡಿದೋಡಿಸುವುದು, ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯ.

ವಿಭಾಗ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸುವ ವಿದ್ಯಾರ್ಥಿಗಳಿಗೆ ಪ್ರತಿ ಉಪ ಶೀರ್ಷಿಕೆಗೆ ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಪುರಸ್ಕರಿಸಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರವನ್ನು ನೀಡಲಾ ಗುವುದು. ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಮಾತ್ರ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವರು.

ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರಾವಿಪ ಕಚೇರಿ ಯಿಂದ ಅಥವಾ ಕರಾವಿಪ ವೆಬ್‌ಸೈಟ್- www.krvp.org -ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮಾ.2ರೊಳಗೆ ಕರಾವಿಪ ಕೇಂದ್ರ ಕಚೇರಿ, ವಿಜ್ಞಾನ ಭವನ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:080-2671839, ಮೊ:9449530245, 9483549159ನ್ನು ಸಂಪರ್ಕಿಸುವಂತೆ ಕರಾವಿಪ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News