ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: ಮೂವರ ಬಂಧನ, ನಾಲ್ವರು ಮಹಿಳೆಯರ ರಕ್ಷಣೆ

Update: 2019-02-20 16:20 GMT

ಮೈಸೂರು,ಫೆ.20: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮೈಸೂರು ನಗರ ಸಿಸಿಬಿ ಪೊಲೀಸರು ವಿಜಯನಗರ ಠಾಣಾ ಸರಹದ್ದಿನ ವಿಜಯನಗರ 4ನೇ ಹಂತದ ಮನೆಯೊಂದರ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಹೊರ ರಾಜ್ಯಗಳಿಂದ ಮಹಿಳೆಯರನ್ನು ಸೇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ರಘುನಂದ (35) ಪ್ರಶಾಂತ್ (30) ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಪ್ರದೀಪ್ (29) ಎಂದು ಗುರುತಿಸಲಾಗಿದೆ.

ಇವರನ್ನು ದಸ್ತಗಿರಿ ಮಾಡಿ, ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 10,500 ರೂ. ನಗದು ಹಣ, 8 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿ ವೇಳೆ ಪಶ್ಚಿಮ ಬಂಗಾಳದ ಓರ್ವ ಮಹಿಳೆ, ಬೆಂಗಳೂರಿನ ಇಬ್ಬರು ಮತ್ತು ಉಡುಪಿಯ ಓರ್ವ ಮಹಿಳೆ ಸೇರಿ ಒಟ್ಟು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ನಗರದ ಅಪರಾಧ ವಿಭಾಗದ ಡಿಸಿಪಿ ಡಾ.ವಿಕ್ರಂ ಆಮ್ಟೆ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಬಿ.ಆರ್.ಲಿಂಗಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಸಿ.ಕಿರಣ್‍ಕುಮಾರ್, ವಿಜಯಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News