ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ: ಶಿವಸೇನೆ, ಬಿಜೆಪಿಯಿಂದ ತದ್ವಿರುದ್ಧ ಹೇಳಿಕೆ

Update: 2019-02-20 16:48 GMT

ಮುಂಬೈ,ಫೆ.20: ಮಹಾರಾಷ್ಟ್ರದಲ್ಲಿ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ ಬುಧವಾರ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪರಸ್ಪರ ತದ್ವಿರುದ್ಧ ಹೇಳಿಕೆ ನೀಡಿದೆ.

ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅತೀಹೆಚ್ಚು ಸ್ಥಾನ ಗೆಲ್ಲುವ ಪಕ್ಷದ ಅಭ್ಯರ್ಥಿಯನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗುವುದು ಎಂದು ಬಿಜೆಪಿ ಸಚಿವ ಚಂದ್ರಕಾಂತ ಪಾಟೀಲ್ ಹೇಳಿಕೆ ನೀಡಿದ್ದಾರೆ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಸೇನೆಯ ರಾಮದಾಸ ಕದಮ್, ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಒಪ್ಪಂದಕ್ಕೆ ಬಂದ ನಂತರವೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಗೆ ತನ್ನ ಮಾತನ್ನು ಉಳಿಸಲು ಸಾಧ್ಯವಾಗುತ್ತಿಲ್ಲವಾದರೆ ಅವರು ಮೈತ್ರಿ ಮುರಿದುಕೊಳ್ಳಲು ಸ್ವತಂತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅತೀಹೆಚ್ಚು ಸ್ಥಾನ ಗೆದ್ದ ಪಕ್ಷದ ಅಭ್ಯರ್ಥಿ ಮುಖ್ಯಮಂತ್ರಿಯಾಗುವ ಪದ್ಧತಿಯನ್ನು ಎರಡೂ ಪಕ್ಷಗಳು ಕಳೆದ 25 ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿವೆ. ಆದರೆ ಈ ಬಾರಿ ನಾನು ಅದನ್ನು ನಿರಾಕರಿಸಿದ್ದೇನೆ. ಎಲ್ಲ ಹುದ್ದೆಗಳನ್ನು ಸಮಾನವಾಗಿ ಹಂಚಬೇಕು ಎಂದು ತಿಳಿಸಿದ್ದೇನೆ. ಅದಕ್ಕೆ ಬಿಜೆಪಿ ಒಪ್ಪಿದ ನಂತರವೇ ಈ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News