ಬೈಕಿನಿಂದ ಬಿದ್ದು ಮಹಿಳೆ ಮೃತ್ಯು

Update: 2019-02-20 16:49 GMT

ಉಡುಪಿ, ಫೆ. 20: ಚಲಿಸುತ್ತಿದ್ದ ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಿನ್ನಿಮುಲ್ಕಿಯ ಕಾರ್ ವಾಶ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಕಿನ್ನಿಮುಲ್ಕಿಯ ಯಶೋಧಾ (57) ಎಂದು ಗುರುತಿಸಲಾಗಿದೆ.

ಇವರು ಫೆ.19ರಂದು ಮಧ್ಯಾಹ್ನ ವೇಳೆ ಸಂಬಂಧಿಕ ಸತೀಶ ಎಂಬವರು ಬೈಕ್ ನಲ್ಲಿ ಹಿಂಬದಿಯಲ್ಲಿ ಕುಳಿತು ಹೋಗುತ್ತಿದ್ದರು. ಈ ವೇಳೆ ಸತೀಶ್ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿಹಿಂಬದಿ ಕುಳಿತಿದ್ದ ಯಶೋದ ರಸ್ತೆಗೆ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಫೆ.20ರಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News