ಪ್ರವಾಸಿ ಟ್ಯಾಕ್ಸಿ ವಿತರಣಾ ಕಾರ್ಯಕ್ರಮಕ್ಕೆ ಫೆ.21 ರಂದು ಚಾಲನೆ

Update: 2019-02-20 17:20 GMT

ಬೆಂಗಳೂರು, ಫೆ. 20: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ (ಫೆ.21) ಬೆಳಗ್ಗೆ 11:30ಕ್ಕೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಪೂರ್ವದ್ವಾರದಲ್ಲಿನ ಪ್ರಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಆರ್.ರೋಷನ್ ಬೇಗ್ ವಹಿಸಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News