ಮೈಸೂರು ವಿವಿ ಕುಲಸಚಿವರಾಗಿ ಪ್ರೊ.ಲಿಂಗರಾಜಗಾಂಧಿ ಅಧಿಕಾರ ಸ್ವೀಕಾರ

Update: 2019-02-20 17:40 GMT

ಮೈಸೂರು,ಫೆ,20: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಪ್ರೊ.ಲಿಂಗರಾಜಗಾಂಧಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರನ್ನು ಮಾತೃ ಇಲಾಖೆಗೆ ನಿಯೋಜನೆಗೊಳಿಸಲಾಗಿದೆ. ಪರೀಕ್ಷಾಂಗ ಕುಲಸಚಿವರಾಗಿದ್ದ ಪ್ರೊ.ಜೆ.ಸೋಮಶೇಖರ್ ಅವರನ್ನು ವರ್ಗಾವಣೆ ಮಾಡಿ ಕುವೆಂಪು ವಿಶ್ವವಿದ್ಯಾನಿಯಲದ ನಿರ್ದೇಶಕರಾಗಿದ್ದ ಡಾ.ಕೆ.ಎಂ.ಮಹದೇವ್ ಅವರನ್ನು ಪರೀಕ್ಷಾಂಗ ಕುಲಸಚಿರನ್ನಾಗಿ ನೇಮಕ ಮಾಡಲಾಗಿದೆ.

ಮೈಸೂರು ವಿವಿ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಇತ್ತು ಹಾಗೂ ಇವರನ್ನು ಈ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸಂಶೋಧಕರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿದ್ದ ಪ್ರೊ.ಲಿಂಗರಾಜಗಾಂಧಿ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ. ಅವರು ಗುರುವಾರ ಪ್ರೊ.ಆರ್.ರಾಜಣ್ಣ ಅವರಿಂದ ಅಧಿಕಾರ ವಹಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News