ಪೆರ್ಲಂಪಾಡಿ: ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2019-02-20 17:44 GMT

ಸುಳ್ಯ, ಫೆ. 20: ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಪೆರ್ಲಂಪಾಡಿಯಲ್ಲಿ ನಡೆದಿದೆ.

ಪುತ್ತೂರು ಖಾಸಗಿ ಶಾಲೆಯ ವಿದ್ಯಾರ್ಥಿ ಸುಹಾಸ್ (15) ಮೃತ ಬಾಲಕ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ತಂದೆ ಕುಮಾರ್ ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News