ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ ವರ್ಗಾವಣೆ

Update: 2019-02-21 05:32 GMT

ಉಡುಪಿ, ಫೆ.21: ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ. ನಿಂಬರಗಿ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.

ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಲಕ್ಷ್ಮಣ್ ನಿಂಬರಗಿ ಅವರನ್ನು ಬೆಂಗಳೂರಿನ ಪೊಲೀಸ್ ವಯರ್‌ಲೆಸ್ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಇದೇ ವೇಳೆ ಉಡುಪಿಯ ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅವರನ್ನು ನೇಮಕಗೊಳಿಸಲಾಗಿದೆ. 2013ನೇ ಸಾಲಿನ ಐಪಿಎಸ್ ಅಧಿಕಾರಿಣಿಯಾಗಿರುವ ಇವರು ಬೆಂಗಳೂರಿನಲ್ಲಿ ಕೆಎಸ್.ಆರ್.ಪಿ.ಯ 4ನೇ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News