​ಮಂಗಳೂರು: ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಆಕಸ್ಮಿಕ

Update: 2019-02-21 07:36 GMT

ಮಂಗಳೂರು, ಫೆ.21: ನಗರದ ಶಾಪಿಂಗ್ ಮಾಲ್ ‘ಸಿಟಿ ಸೆಂಟರ್’ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮಾಲ್ ಹೊಗೆಮಯವಾಗಿತ್ತು.

ಸಿಟಿ ಸೆಂಟರ್‌ನ ನಾಲ್ಕನೆ ಮಹಡಿಯಲ್ಲಿರುವ ಫುಡ್ ಕೋರ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಫುಡ್ ಕೋರ್ಟ್‌ನ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮಾಲ್ ತುಂಬಾ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿಕೊಂಡಿದ್ದು, ಒಳಗಿದ್ದ ಭಾರೀ ಸಂಖ್ಯೆಯ ಗ್ರಾಹಕರನ್ನು ಹೊರಗೆ ಕಳುಹಿಸಲಾಗಿದೆ.

ಬೆಂಕಿ ಆಕಸ್ಮಿಕಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News